ಬೆಂಗಳೂರು | ಬೆಲೆ ಏರಿಕೆ ಖಂಡಿಸಿ ಎತ್ತಿನಗಾಡಿ, ರಿಕ್ಷಾ ಎಳೆದು ಯುವ ಕಾಂಗ್ರೆಸ್ ಪ್ರತಿಭಟನೆ

Update: 2025-04-09 00:06 IST
ಬೆಂಗಳೂರು | ಬೆಲೆ ಏರಿಕೆ ಖಂಡಿಸಿ ಎತ್ತಿನಗಾಡಿ, ರಿಕ್ಷಾ ಎಳೆದು ಯುವ ಕಾಂಗ್ರೆಸ್ ಪ್ರತಿಭಟನೆ
  • whatsapp icon

ಬೆಂಗಳೂರು : ಪೆಟ್ರೋಲ್, ಡಿಸೇಲ್, ಅಡುಗ ಅನಿಲ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರಕಾರದ ವಿರುದ್ಧ ಮಂಗಳವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಎತ್ತಿನಗಾಡಿ ಮೂಲಕ ಯುವ ಕಾಂಗ್ರೆಸ್ ಕಾರ್ಯಕ್ರರ್ತರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ್‍ಗೌಡ, ಬಿಜೆಪಿಯವರು ಜನಾಕ್ರೋಶ ಯಾತ್ರೆ ಮೂಲಕ ಬೀದಿಗಿಳಿದಿದ್ದಾರೆ. ಮೊಸರು, ಹಾಲಿನ ಮೇಲೆ ಜಿಎಸ್‍ಟಿ ಹಾಕಲಾಗಿದೆ. ಹಾಗಾದರೆ ಕೇಂದ್ರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಬೇಕು. ಬಿಜೆಪಿಯವರು ಮಾಡುವ ಕೆಲಸ ಎಲ್ಲವೂ ದೇಶ ಮತ್ತು ರಾಜ್ಯ ವಿರೋಧಿ ಕೆಲಸಗಳೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಗರು ಬೇರೆಯವರನ್ನು ದೂಷಿಸುತ್ತಾರೆ. ಅವರು ಸರಿಯಾದ ಕೆಲಸ ಮಾಡುವುದಿಲ್ಲ. ಬಿಜೆಪಿ ಸರಕಾರ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸವನ್ನು ಮಾಡುತ್ತಿದೆ. ಗ್ಯಾಸ್ ಬೆಲೆಯನ್ನು ಒಂದೇ ಸಲ 50 ರೂ. ಹೆಚ್ಚಳ ಅದರ ಪರಿಣಾಮ ಬಡವರು, ರೈತರು, ಕೂಲಿ ಕಾರ್ಮಿಕರಿಗೆ ಆಗುತ್ತದೆ. ರಾಜ್ಯ ಸರಕಾರ ಏನೇ ಮಾಡಿದರೂ ಜನರ ಒಳಿತಿಗಾಗಿ ಮಾಡುತ್ತದೆ ಎಂದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು, ಅಪಾರ ಸಂಖ್ಯಯ ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News