ಗ್ರಾಮ ಆಡಳಿತಾಧಿಕಾರಿಗಳಿಗೆ ವಿತರಿಸಲು 4 ಸಾವಿರ ಲ್ಯಾಪ್‍ಟ್ಯಾಪ್ ಖರೀದಿ : ಕೃಷ್ಣ ಬೈರೇಗೌಡ

Update: 2025-03-05 23:29 IST
Photo of Krishna Bhairegowda

ಕೃಷ್ಣ ಭೈರೇಗೌಡ

  • whatsapp icon

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಮಾಡುವ ಉದ್ದೇಶ ಹೊಂದಿದ್ದು, ಈಗಾಗಲೇ 4 ಸಾವಿರ ಲ್ಯಾಪ್‍ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಬುಧವಾರ ವಿಧಾನಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲ್ಯಾಪ್‍ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಒದಗಿಸುವ ಛಾವಡಿಗಳು ಕಂದಾಯ ಇಲಾಖೆಯ ಸುಪರ್ಧಿಗೆ ಸೇರಿರುತ್ತವೆ. ಈ ಛಾವಡಿಗಳು ಶಿಥಿಲಗೊಂಡಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನರ್ ನಿರ್ಮಾಣ ಮಾಡಲು ಪರಿಶೀಲಿಸಲಾಗುವುದು ಎಂದು ಕೃಷ್ಣಭೈರೇಗೌಡ ಹೇಳಿದರು.

ಗ್ರಾಮ ಲೆಕ್ಕಾಧಿಕಾರಿಗಳು ಒಂದು ಕಡೆ ಕೂತು ಕೆಲಸ ಮಾಡಲು ಸಹಾಯವಾಗುವಂತೆ ಛಾವಡಿಗೆ ಪರ್ಯಾಯವಾಗಿ ಸ್ಥಳವಕಾಶವನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಸಚಿವರ ಜೊತೆ ಚರ್ಚಿಸಿ ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ಕೂಡಲು ಅವಕಾಶ ಮಾಡಿಕೊಡಲು ಯೋಜಿಸಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ದಾಖಲೆಗಳನ್ನು ಸಂರಕ್ಷಿಸಿಕೊಳ್ಳಲು ಅವರಿಗೆ ಕಪಾಟುಗಳನ್ನು ಒದಗಿಸಲಾಗಿದೆ ಹಾಗೂ ಲೇಖನ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಜೊತೆಗೆ ಪ್ರಯಾಣ ಭತ್ಯೆ ಸಹ ಒದಗಿಸಲಾಗುತ್ತಿದೆ ಎಂದು ಕೃಷ್ಣ ಭೈರೇಗೌಡ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News