ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ ; ತಗ್ಗು ಪ್ರದೇಶದ ರಸ್ತೆಗಳು ಜಲಾವೃತ

Update: 2024-06-02 15:43 GMT

ಬೆಂಗಳೂರು : ರವಿವಾರ ನಗರದ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ ಸೇರಿದಂತೆ ಭರ್ಜರಿ ಮಳೆಯಾಗಿದೆ. ಆದ್ದರಿಂದ ತಗ್ಗು ಪ್ರದೇಶದ ರಸ್ತೆಗಳು ಜಲಾವೃತವಾಗಿ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.

ಜೂನ್ ತಿಂಗಳ ಮೊದಲ ದಿನವಾದ ಶನಿವಾರದಿಂದ (ಜೂ.1) ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ರವಿವಾರವೂ ಗಾಳಿ ಸಹಿತ ನಗರದ ಹಲವೆಡೆ ಗಾಳಿ ಸಹಿತ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ವಿಧಾನಸೌಧ, ಟೌನ್‍ಹಾಲ್, ಕೆ.ಆರ್.ಮಾರ್ಕೆಟ್, ಕಾರ್ಪೊ ರೇಷನ್, ಶಿವಾಜಿನಗರ, ಯಲಹಂಕ ಸುತ್ತಮುತ್ತ ಜೋರು ಮಳೆ ಸುರಿದಿದ್ದು, ಬಿರುಗಾಳಿಗೆ ಹಲವು ಕಡೆಗಳಲ್ಲಿ ಮರಗಳು ಧರೆಗುರುಳಿವೆ.

ಮೆಟ್ರೋ ಸಂಚಾರ ವ್ಯತ್ಯಯ: ರವಿವಾರ ಸುರಿದ ಭಾರೀ ಮಳೆಯಿಂದಾಗಿ ಎಂಜಿ ರಸ್ತೆ ಮತ್ತು ಟ್ರಿನಿಟಿ ನಿಲ್ದಾಣಗಳ ನಡುವಿನ ವಯಡಕ್ಟ್ ಟ್ರ್ಯಾಕ್‍ನಲ್ಲಿ ಮರದ ಕೊಂಬೆಗಳು ಬಿದ್ದಿವೆ. ಆದ ಕಾರಣ ಎಂಜಿ ರಸ್ತೆ ಮತ್ತು ಇಂದಿರಾನಗರ ನಡುವೆ ಮೆಟ್ರೋ ರೈಲು ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನೇರಳೆ ಮಾರ್ಗದ ಇಂದಿರಾನಗರ ಮತ್ತು ವೈಟ್‍ಫೀಲ್ಡ್ ಹಾಗೂ ಚಲ್ಲಘಟ್ಟ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಶಾರ್ಟ್ ಲೂಪ್‍ಗಳು ಚಾಲನೆಯಲ್ಲಿವೆ. ಉಂಟಾದ ಅನನುಕೂಲತೆಯನ್ನು ವಿಷಾದಿಸಲಾಗುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಮ್ಮ ಮೆಟ್ರೋ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News