ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನರಿಗೆ 14 ದಿನಗಳ ನ್ಯಾಯಾಂಗ ಬಂಧನ
Update: 2024-09-21 07:49 GMT
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ನೀಡಿದೆ.
ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಶಾಸಕ ಮುನಿರತ್ನರನ್ನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದು ಬೆಳಗ್ಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.