ರಾಜ್ಯಾದ್ಯಂತ 8,954 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕ

Update: 2024-06-07 14:17 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ 8,954 ಅತಿಥಿ ಶಿಕ್ಷಕರನ್ನು ನೇಮಕಾತಿಗೆ ಅವಕಾಶ ನೀಡಿದ್ದು, ಜೂ.15ರೊಳಗಾಗಿ ಪ್ರೌಢ ಶಾಲಾ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು ವಿವರವನ್ನು ಕಳುಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರೌಢ ಶಾಲೆಗಳಲ್ಲಿ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಪ್ರೌಢ ಶಾಲಾ ಅತಿಥಿ ಶಿಕ್ಷಕರ ವೇತನ 10,500 ರೂ.ಗಳಾಗಿರುತ್ತದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News