ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ

Update: 2024-10-22 06:56 GMT

ನಟ ದರ್ಶನ್(ಎಡಚಿತ್ರ), ರೇಣುಕಸ್ವಾಮಿ

ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ. ಅವರನ್ನು ವಿಮ್ಸ್ ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿದೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ಕೋರ್ಟ್ ಗಮನಕ್ಕೆ ತಂದರು.

ಈ ಸಂಬಂಧ ಜೈಲು ಅಧಿಕಾರಿಗಳಿಂದ ದರ್ಶನ್ ಅವರ ವೈದ್ಯಕೀಯ ವರದಿಯನ್ನು ಹೈಕೋರ್ಟ್ ಕೇಳಿದೆ. ಅಲ್ಲದೆ ಆಕ್ಷೇಪ ಸಲ್ಲಿಸುವಂತೆ ಎಸ್.ಪಿ.ಪಿ. ಪ್ರಸನ್ನಕುಮಾರ್ ರಿಗೆ ಹೈಕೋರ್ಟ್ ಸೂಚಿಸಿ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News