ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Update: 2024-10-28 18:02 GMT

ದರ್ಶನ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ವೈದ್ಯಕೀಯ ಪರೀಕ್ಷಾ ವರದಿಯನ್ನು ಜೈಲು ಅಧಿಕಾರಿಗಳು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.

ಜಾಮೀನು ಕೋರಿ ನಟ ದರ್ಶನ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಹೈಕೋರ್ಟ್‌ಗೆ ಜೈಲು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ವೈದ್ಯಕೀಯ ವರದಿ ಸಲ್ಲಿಸಿದ್ದರು.

ತಮಗೂ ವರದಿಯ ಪ್ರತಿ ನೀಡುವಂತೆ ಎಸ್‌ಪಿಸಿ ಮನವಿ ಮಾಡಿದರು. ಬಳಿಕ ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಎಂಆರ್‌ಐ, ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ಈ ವೇಳೆ ಕುಟುಂಬ ಸದಸ್ಯರು ಹಾಜರಿದ್ದರು. ನ್ಯೂರೋ ಸರ್ಜನ್ ಮೂರು ಅಂಶ ಹೇಳಿದ್ದಾರೆ. ಡಿಸ್ಕ್ ಸಮಸ್ಯೆ ಇದೆ. ತಕ್ಷಣವೇ ಸರ್ಜರಿಗೆ ಸೂಚಿಸಿದ್ದಾರೆ. ಇಲ್ಲವಾದರೆ ಪ್ಯಾರಾಲಿಸಿಸ್ ಆಗಬಹುದು. ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಹೀಗಾಗಿ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು.

ಈ ವೇಳೆ ಫಿಸಿಯೋಥೆರಪಿ ಮತ್ತು ಆಪರೇಷನ್‌ಗೆ ಸೂಚಿಸಲಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಇದಕ್ಕೆ ವ್ಯವಸ್ಥೆ ಇದೆ ಎಂದು ವರದಿಯಲ್ಲಿದೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ವೇಳೆ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಹಾಗಾಗಿ ವರದಿ ಪರಿಶೀಲಿಸಿ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಿ‌‌, ವಿಚಾರಣೆ ನಾಳೆ(ಅ.29) ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News