ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮಾನನಷ್ಟ ಮೊಕದ್ದಮೆ | ರೋಹಿಣಿ ಸಿಂಧೂರಿಗೆ ನ್ಯಾಯಾಲಯ ನೋಟಿಸ್
Update: 2024-12-19 07:27 GMT
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಮೌನ್ಸಿಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿಗೊಳಿಸಿದೆ.
19,2,2023ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದಾರೆ. ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆಯಾಗಿದೆ. 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ. ಹೀಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.