ದೇವೇಗೌಡರನ್ನು ಭೇಟಿ ಮಾಡಿದ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ
Update: 2023-06-25 15:29 GMT
ಬೆಂಗಳೂರು, ಜೂ. 25: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭೇಟಿ ಮಾಡಿ ರಾಜಕೀಯ ಕುತೂಹಲ ಸೃಷ್ಟಿಸಿದ್ದಾರೆ.
ರವಿವಾರ ಇಲ್ಲಿನ ಪದ್ಮನಾಭ ನಗರದಲ್ಲಿನ ದೇವೇಗೌಡರ ನಿವಾಸಕ್ಕೆ ತೆರಳಿದ ಶಾಮನೂರು ಅವರು, ದೇವೇಗೌಡರಿಗೆ ಪುಷ್ಪಾ ಗುಚ್ಚವನ್ನು ನೀಡಿ, ಶಾಲು ಹೊದಿಸಿ ಅಭಿನಂದಿಸಿದರು. ಇದೇ ವೇಳೆ ದೇವೇಗೌಡರೂ, ಶಾಮನೂರು ಅವರನ್ನು ಸನ್ಮಾನಿಸಿದರು. ಬಳಿಕ ಉಭಯ ನಾಯಕರು ಕುಶಲೋಪರಿ ವಿಚಾರಿಸಿದರು ಎಂದು ಗೊತ್ತಾಗಿದೆ.