ಲೈಂಗಿಕ ಹಗರಣ | ವಿದೇಶದಿಂದ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ : ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ

Update: 2024-05-05 14:20 IST
ಲೈಂಗಿಕ ಹಗರಣ | ವಿದೇಶದಿಂದ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ : ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ
  • whatsapp icon

ಬೆಂಗಳೂರು : ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಶನಿವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದ್ದು, ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು(ಮೇ.5)  ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು, ಕೊಚ್ಚಿ, ಗೋವಾ, ಬೆಂಗಳೂರಿನ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ ಎನ್ನಲಾಗುತ್ತಿದೆ. ಬಳಿಕ ಸ್ಥಳೀಯ ಠಾಣೆಗೆ ಕರೆದೊಯ್ಯುವ ಪೊಲೀಸರು, ವೈದ್ಯಕೀಯ ತಪಾಸಣೆ ನಂತರ ಪ್ರಜ್ವಲ್​ರನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News