ಬೆಂಗಳೂರು | ಶಿವಕುಮಾರ ಸ್ವಾಮೀಜಿಯ ಪುತ್ಥಳಿ ವಿರೂಪಗೊಳಿಸಿದ್ದ ಪ್ರಕರಣ : ಆರೋಪಿ ಬಂಧನ

Update: 2024-12-05 12:22 GMT

ಸಾಂದರ್ಭಿಕ ಚಿತ್ರ | PC : PTI

ಬೆಂಗಳೂರು : ಇಲ್ಲಿನ ವೀರಭದ್ರನಗರದ ಬಸ್ ನಿಲ್ದಾಣ ಬಳಿ ಪ್ರತಿಷ್ಠಾಪಿಸಲಾಗಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಆರೋಪಿಯನ್ನು ಇಲ್ಲಿನ ಗಿರಿನಗರ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಬ್ಯಾಡರಹಳ್ಳಿಯ ನಿವಾಸಿ ಶಿವಕುಮಾರ್ ಯಾನೆ ರಾಜ್ ವಿಷ್ಣು (34) ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.

ಜಯಜರ್ನಾಟಕ ಜನಪರ ವೇದಿಕೆ ಸಂಘಟನೆಯು ಐದು ವರ್ಷಗಳ ಹಿಂದೆ ವೀರಭದ್ರನಗರ ಬಸ್ ನಿಲ್ದಾಣ ಬಳಿ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಅನಾವರಣಗೊಳಿಸಿತ್ತು. ಪುತ್ಥಳಿ ನಿರ್ವಹಣೆಯನ್ನು ಸಂಘಟನೆ ಮಾಡುತಿತ್ತು. ಆದರೆ, ನ.30 ರಂದು ದ್ವಿಚಕ್ರವಾಹನದಲ್ಲಿ ಅಪರಿಚಿತ ವ್ಯಕ್ತಿ ಪುತ್ಥಳಿಯನ್ನು ವಿರೂಪಗೊಳಿಸಿದ್ದ. ಈ ಸಂಬಂಧ ಸಂಘಟನೆ ಅಧ್ಯಕ್ಷ ಪರಮೇಶ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News