ನಾಳೆ ಸಿದ್ದರಾಮಯ್ಯರನ್ನು ಬೆಂಬಲಿಸಿ ಧರಣಿ : ಕ್ಯಾಲಸನಹಳ್ಳಿ ಶ್ರೀನಿವಾಸ್

Update: 2024-08-28 15:36 GMT

ಬೆಂಗಳೂರು : ಜನರಿಂದ ಆಯ್ಕೆಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಹುನ್ನಾರ ಮಾಡಿರುವ ಬಿಜೆಪಿ- ಜೆಡಿಎಸ್ ನಡೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ವತಿಯಿಂದ ಆ.29ರಂದು ಬೆಳಗ್ಗೆ 11.30ಕ್ಕೆ ನಗರದ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಧರಣಿ ನಡೆಯಲಿದೆ ಎಂದು ಜಿಲ್ಲಾ ಸಂಚಾಲಕ ಕ್ಯಾಲಸನಹಳ್ಳಿ ಶ್ರೀನಿವಾಸ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ, ರಾಜ್ಯ ಸಂಚಾಲಕ ಡಿ.ಜಿ.ಸಾಗರ್ ನೇತೃತ್ವದಲ್ಲಿ ರಾಜ್ಯಾಧ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಿ, ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಬಲಾಡ್ಯ ಜಾತಿ-ಧರ್ಮವನ್ನು ಇಟ್ಟುಕೊಂಡು ಅಧಿಕಾರ ಹಿಡಿದಿರುವ ಬಿಜೆಪಿ-ಜೆಡಿಎಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಹಾಗೂ ಸಂವಿಧಾನ ಪ್ರಜಾಪ್ರಭುತ್ವ ವಿರೋಧಿಯಾಗಿವೆ. ಅದಕ್ಕಾಗಿ ಜನರಿಂದ ಆಯ್ಕೆಯಾಗಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಮಾಡುತ್ತಿವೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News