ಶಿವರಾಜಕುಮಾರ್ ಆಗಮನವನ್ನು ಎದುರು ನೋಡುತ್ತಿರುವ ಹಿತೈಷಿಗಳಲ್ಲಿ ನಾನೂ ಒಬ್ಬ : ಸಿದ್ದರಾಮಯ್ಯ

Update: 2024-12-24 13:22 GMT

PC : x/@siddaramaiah

ಬೆಂಗಳೂರು : ‘ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಚಿತ್ರನಟ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಮಂಗಳವಾರ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು ಕಾಪಾಡಲಿದೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಚಿತ್ರರಂಗದ ನಟ ಶಿವರಾಜ್ ಕುಮಾರ್‍ಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ ಎಂದು ತಿಳಿಸಿದ್ದಾರೆ.

‘ನನಗೆ ತಿಳಿದಂತೆ ನಟ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News