ದೇಶದಲ್ಲೆಡೆ ತರಲು ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆ ಜಾರಿಗೆ ಒತ್ತಾಯಿಸಿ ನಿರ್ಣಯ ತನ್ನಿ : ಬಿಜೆಪಿ ಸದಸ್ಯರಿಗೆ ಸಿಎಂ ಸವಾಲು

Update: 2025-03-18 23:48 IST
ದೇಶದಲ್ಲೆಡೆ ತರಲು ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆ ಜಾರಿಗೆ ಒತ್ತಾಯಿಸಿ ನಿರ್ಣಯ ತನ್ನಿ : ಬಿಜೆಪಿ ಸದಸ್ಯರಿಗೆ ಸಿಎಂ ಸವಾಲು
  • whatsapp icon

ಬೆಂಗಳೂರು : ರಾಜ್ಯದಲ್ಲಿ ಜಾರಿಯಾಗಿರುವಂತೆ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯನ್ನು ದೇಶದಲ್ಲೆಡೆ ತರಲು ಕೇಂದ್ರಕ್ಕೆ ಒತ್ತಾಯಿಸಿ ನಿರ್ಣಯಗಳನ್ನು ತನ್ನಿ, ನಾವೆಲ್ಲರೂ ಬೆಂಬಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು.

ಮಂಗಳವಾರ ವಿಧಾನ ಪರಿಷತ್ತಿನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ ಮಾತನಾಡಿದ ಅವರು, ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯ 7ಡಿ ತೆಗೆಯುವ ಮುಂಚೆ 2022-23ರಲ್ಲಿ ದಲಿತರಿಗೆ ಮೀಸಲಿಟ್ಟ 2,412 ಕೋಟಿ ರೂ. ದುರುಪಯೋಗವಾಗಿದೆ. ಈಗ ಎಸ್‍ಸಿಪಿ/ಟಿಎಸ್‍ಪಿ ಅನುದಾನ ದುರ್ಬಳಕೆಯಾಗಿದೆ ಎನ್ನಲು ಪ್ರತಿಪಕ್ಷದವರಿಗೆ ನೈತಿಕತೆ ಇಲ್ಲ ಎಂದರು.

ಬಿಜೆಪಿಯವರು ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯನ್ನು ಜಾರಿಗೆ ತರಲಿಲ್ಲ. ಕಾಂಗ್ರೆಸ್ ಸರಕಾರದವರು ಕಾಯ್ದೆ ತರುವ ಜೊತೆಗೆ ಮುಂಬಡ್ತಿ ಮೀಸಲಾತಿಯನ್ನೂ ಜಾರಿಗೆ ತಂದಿದ್ದಾರೆ. ಮುಂಬಡ್ತಿ ಮೀಸಲಾತಿ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಅವರು ತಿಳಿಸಿದರು.

ಹಾಲಿನ ಪ್ರೋತ್ಸಾಹ ಧನವನ್ನು 2ರೂ. ನಿಂದ 5 ರೂ.ಗೆ ಹೆಚ್ಚಳ ಮಾಡಿದ್ದು, ಕಾಂಗ್ರೆಸ್ ಸರಕಾರವಾಗಿದೆ. ಹಿಂದಿನ ಸರಕಾರ ಅಧಿಕಾರದಲ್ಲಿದ್ದಾಗ ಈ ಪ್ರೋತ್ಸಾಹ ಧನ ಹೆಚ್ಚು ಮಾಡಲಿಲ್ಲ. ಬಿಜೆಪಿ ಸರಕಾರ ಒಟ್ಟು 600 ಕೋಟಿ ರೂ.ಗಳ ಪ್ರೋತ್ಸಾಹ ಧನ ಪಾವತಿ ಬಾಕಿ ಇರಿಸಿಕೊಂಡಿದೆ. ಈ ಬಾಕಿಯನ್ನು ನಾವು ಪೂರ್ತಿ ತೀರಿಸಿದ್ದೇವೆ. 8.16 ಲಕ್ಷ ಹಾಲು ಉತ್ಪಾದಕರು ಇದರ ಲಾಭ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರೋತ್ಸಾಹ ಧನ 7 ರೂ.ಗೆ ಹೆಚ್ಚಳ ಮಾಡಲಾಗುವುದು.

-ಸಿದ್ದರಾಮಯ್ಯ, ಮುಖ್ಯಮಂತ್ರಿ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News