ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಳೆ ‘ಸಾಧನಾ ಸಮಾವೇಶ’
Update: 2025-04-26 22:29 IST

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾಳೆ(ಎ.27) ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ‘ಸಾಧನೆ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬೆಂ.ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು, ಕುಂದಾಣ ಹೋಬಳಿಯಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಬೆಳಗ್ಗೆ 11ಗಂಟೆಗೆ ಇಲ್ಲಿನ ಸಾಧನಾ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಹಿಸಲಿದ್ದಾರೆ.