ರಾಜ್ಯದ ಆರು ಜಿಲ್ಲೆಗಳ 54 ಸ್ಥಳಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ

Update: 2024-07-19 14:24 GMT

ಬೆಂಗಳೂರು, ಜು.19: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 54 ಸ್ಥಳಗಳಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಸಂಬಂಧ ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಪೊಲೀಸ್ ನ 100 ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಮತ್ತು ತುಮಕೂರಿನಲ್ಲಿ ದಾಖಲಾಗಿದ್ದ ದೂರಿನ ಅನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ. ಶೋಧಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News