ಮುಡಾ ಪ್ರಕರಣ | ಹೈಕೋರ್ಟ್ ತೀರ್ಪು ಸತ್ಯಕ್ಕೆ ಸಂದ ಜಯ : ಸ್ನೇಹಮಯಿ ಕೃಷ್ಣ
Update: 2024-09-24 15:40 GMT
ಬೆಂಗಳೂರು : ‘ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ತನಿಖೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ ಹೈಕೋರ್ಟ್ ನೀಡಿರುವ ತೀರ್ಪು ಸತ್ಯಕ್ಕೆ ಸಂದ ಜಯ’ ಎಂದು ಮುಡಾ ಪ್ರಕರಣದ ಅರ್ಜಿದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇದು ನಮ ಹೋರಾಟಕ್ಕೆ ಸಿಕ್ಕ ಜಯ. ರಾಜಕಾರಣಿಗಳು ತಮ ಅಧಿಕಾರವನ್ನ ದುರುಪಯೋಗಪಡಿಸಿಕೊಂಡು ಏನು ಮಾಡಿದರೂ ನಡೆಯುತ್ತದೆ ಎಂಬ ಧೋರಣೆಗೆ ತಕ್ಕ ಪಾಠವಾಗಿದೆ. ಮುಂದಿನ ದಿನಗಳಲ್ಲಿಯೂ ನಾವು ಕಾನೂನು ಹೋರಾಟ ಮುಂದುವರಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು.