ಕನಿಷ್ಟ ಹಾಜರಾತಿ ಇಲ್ಲವಾದರೆ ಖಾಸಗಿ ಅಭ್ಯರ್ಥಿಯಾಗಿ ಎಸೆಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ

Update: 2025-02-07 20:51 IST
ಕನಿಷ್ಟ ಹಾಜರಾತಿ ಇಲ್ಲವಾದರೆ ಖಾಸಗಿ ಅಭ್ಯರ್ಥಿಯಾಗಿ ಎಸೆಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ

ಸಾಂದರ್ಭಿಕ ಚಿತ್ರ

  • whatsapp icon

ಬೆಂಗಳೂರು : ಎಸೆಸೆಲ್ಸಿ-2024ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಶೇ.75ಕ್ಕಿಂತ ಹಾಜರಾತಿ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಮತ್ತು 3ಕ್ಕೆ ಖಾಸಗಿ ಅಭ್ಯರ್ಥಿಯಾಗಿ ನೋಂದಣಿ ಮಾಡಿ ಪರೀಕ್ಷೆ ಹಾಜರಾಗಲು ಅವಕಾಶ ಕಲ್ಪಿಸಲಾಗಿತ್ತು. ಇದನ್ನೇ 2024-25ನೆ ಸಾಲಿನ ಪರೀಕ್ಷೆಗೂ ಮುಂದುವರೆಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.

ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. ಆದರೆ 2024ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಶೇ.75ಕ್ಕಿಂತ ಹಾಜರಾತಿ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಪರೀಕ್ಷೆ-2 ಮತ್ತು 3ಕ್ಕೆ ಖಾಸಗಿ ಅಭ್ಯರ್ಥಿಯಾಗಿ ನೋಂದಣಿ ಮಾಡಿ ಪರೀಕ್ಷೆ ಹಾಜರಾಗಲು ಅವಕಾಶ ಕಲ್ಪಿಸಲಾಗಿತ್ತು. 2024-25ನೇ ಸಾಲಿನ ಪರೀಕ್ಷೆಗೂ ಈ ನಿಯಮವನ್ನು ಮುಂದುವರೆಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News