ತಳಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಲವರ್ಧನೆ : ಡಿ.ಕೆ.ಶಿವಕುಮಾರ್

Update: 2024-06-14 16:11 GMT

ಬೆಂಗಳೂರು : ಪಕ್ಷದ ಮೂಲ ಸಿದ್ಧಾಂತವನ್ನು ಯಾವ ಕಾರಣಕ್ಕೂ ಕೈ ಬಿಡಬಾರದು ಎಂದು ಹಿರಿಯ ನಾಯಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಲು ಹಾಗೂ ತಳಮಟ್ಟದಿಂದ ಪಕ್ಷ ಬಲಪಡಿಸುವ ಬಗ್ಗೆ ನಮ್ಮ ನಾಯಕರು ಸಲಹೆ ನೀಡಿದ್ದಾರೆ. ಪಕ್ಷ ಸಂಘಟನೆ ಬಗ್ಗೆಯೂ ಮಾರ್ಗದರ್ಶನಗಳನ್ನು ನೀಡಿದ್ದಾರೆ ಎಂದರು.

ನಿಗಮ ಮಂಡಳಿಗಳ ಅಧ್ಯಕ್ಷರ ಸಭೆ ಕರೆದಿದ್ದು, ಜನರ ಭಾವನೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಜನರ ಬಳಿ ವರ್ತನೆ ಹೇಗಿರಬೇಕು, ಕೆಲಸಗಳನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎಂದು ಸಲಹೆ ನೀಡಲಾಗುವುದು. ಕೆಲವೊಂದಷ್ಟು ಜನ ಟ್ರ್ಯಾಪ್ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಬಹಳ ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಲಾಗುವುದು ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News