ಯತ್ನಾಳ್ ಬಣದಿಂದ ಜೆಪಿಸಿ ಅಧ್ಯಕ್ಷರಿಗೆ ವಕ್ಫ್ ವರದಿ ಸಲ್ಲಿಕೆ

Update: 2024-12-04 06:52 GMT

PC : ANI

ಹೊಸದಿಲ್ಲಿ : ಬಸನಗೌಡ ಪಾಟೀಲ್​ ಯತ್ನಾಳ್ ಮತ್ತು ಅವರ ತಂಡ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರನ್ನು ಭೇಟಿ ಮಾಡಿದೆ. ಹೊಸದಿಲ್ಲಿಯಲ್ಲಿಂದು ಯತ್ನಾಳ್ ತಂಡ ದಾಂಬಿಕಾ ಪಾಲ್ ಅವರನ್ನು ಭೇಟಿಯಾಗಿ ವಕ್ಫ್​ ವಿವಾದದ ವರದಿಯನ್ನು ಸಲಿಸಿತು.

ಯತ್ನಾಳ್, ರಮೇಶ್ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ಅವರೊಂದಿಗೆ ಜಗದಾಂಬಿಕಾ ಪಾಲ್ ಅವರನ್ನು  ಭೇಟಿಯಾಗಿದ್ದು, ವರದಿ ಸಲ್ಲಿಸಿದ್ದಾರೆ.

ಕಲಬುರಗಿ, ಬೀದರ್, ಬಿಜಾಪುರ, ಯಾದಗಿರಿ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಸಂಗ್ರಹಿಸಿದ ಮಾಹಿತಿ ವರದಿಯಲ್ಲಿದೆ. ಅಲ್ಲದೇ ವಕ್ಫ್ ಇತ್ತಿಚೆಗೆ ನೋಟಿಸ್ ನೀಡಿದ ಆಸ್ತಿಗಳ ಬಗ್ಗೆ ಜಗದಾಂಬಿಕಾ ಪಾಲ್ ಅವರಿಗೆ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಮಾಹಿತಿ ನೀಡಿದರು ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News