ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಮಾಹಿತಿ
Update: 2024-12-25 05:17 GMT
ಬೆಂಗಳೂರು: ಚಿತ್ರನಟ ಡಾ. ಶಿವರಾಜ್ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅಮೆರಿಕದ ಮಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ದಾಖಲಾಗಿರುವ ಶಿವರಾಜ್ ಕುಮಾರ್ ಅವರಿಗೆ ಡಾ.ಮುರುಗೇಶ ಮನೋಹರನ್ ಮಾರ್ಗದರ್ಶನದಲ್ಲಿ ಡಿ.24ರಂದು ಶಸ್ತ್ರಚಿಕಿತ್ಸೆ ನಡೆದಿದೆ. ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ.ಶಿವರಾಜ್ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು ಎಂದು ಡಾ.ಮುರುಗೇಶ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರ ಸುಗಮ ಚೇತರಿಕೆಯನ್ನು ಖಚಿತಪಡಿಸಲು ಪ್ರಸಕ್ತ ತೀವ್ರ ವೈದ್ಯಕೀಯ ನಿರೀಕ್ಷಣೆಯಲ್ಲಿದ್ದಾರೆ ಮತ್ತು ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನವನ್ನು ಪಡೆಯುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.