ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ಸುಧೀರ್ ಕುಮಾರ್ ಮುರೊಳ್ಳಿ ನೇಮಕ
Update: 2025-03-25 23:30 IST

ಬೆಂಗಳೂರು : ಹಿರಿಯ ವಕೀಲ ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರನ್ನಾಗಿ ನೇಮಿಸಿ ಸಮಿತಿಯ ಅಧ್ಯಕ್ಷ ವಿನಯ್‍ಕುಮಾರ್ ಸೊರಕೆ ಆದೇಶ ಹೊರಡಿಸಿದ್ದಾರೆ.
ಕರಾವಳಿ ಭಾಗದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರು ಉತ್ತಮ ಸಂಘಟನಾಕಾರರಾಗಿದ್ದು, ಜೊತೆಗೆ ವಾಗ್ಮಿಗಳಾದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ನೇಹಜೀವಿಯಾಗಿ ಸಮಾಜಮುಖಿ ಹಾಗೂ ಶೃಂಗೇರಿ, ಕೊಪ್ಪ ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇವರ ಕಾರ್ಯವೈಖರಿಯನ್ನು ಪರಿಗಣಿಸಿ ಮುಖ್ಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ವಿನಯ್‍ಕುಮಾರ್ ಸೊರಕೆ ತಿಳಿಸಿದ್ದಾರೆ.