ಬೆಂಗಳೂರು : ಮಾಜಿ ರಿಜಿಸ್ಟರ್ ಜತೆ ಪತ್ನಿಯ ಅನೈತಿಕ ಸಂಬಂಧ ಆರೋಪ : ಪತಿ ಆತ್ಮಹತ್ಯೆ
Update: 2024-12-23 12:09 GMT
ಬೆಂಗಳೂರು : ಮಾಜಿ ರಿಜಿಸ್ಟರ್ ಜತೆ ಪತ್ನಿ ಅನೈತಿಕ ಸಂಬಂಧ ಹೊಂದಿರುವುದಾಗಿ ಬೇಸತ್ತು ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಲಾರಿ ಮಾಲಕ 45 ವರ್ಷದ ಸ್ವಾಮಿ ಮೃತ ಪತಿ ಎಂದು ಗುರುತಿಸಲಾಗಿದ್ದು, ಘಟನೆ ಸಂಬಂಧ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಸ್ವಾಮಿ ಕುಟುಂಬಸ್ಥರು, ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಆಧಾರದಡಿ ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿದ್ದರು. ಆಗ ಅಲ್ಲಿದ್ದ ವಿವಿಯ ರಿಜಿಸ್ಟರ್ ಜತೆ ಅನೈತಿಕ ಸಂಬಂಧ ಹೊಂದಿದ್ದಳು. ಇದರಿಂದ ಮನನೊಂದು ಸ್ವಾಮಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆರೋಪಿಸಿದ್ದಾರೆ.