ನಕ್ಸಲರಿಗೆ ಸರಕಾರ ಶರಣಾಗಿದೆಯೋ?: ಸುನಿಲ್ ಕುಮಾರ್ ಪ್ರಶ್ನೆ

Update: 2025-01-08 13:50 GMT

ಬೆಂಗಳೂರು : ನಕ್ಸಲರು ಸರಕಾರಕ್ಕೆ ಶರಣಾಗಿದ್ದಾರೋ, ನಕ್ಸಲರಿಗೆ ಸರಕಾರ ಶರಣಾಗಿದೆಯೋ ? ಭೂಗತ ಚಟುವಟಿಕೆ ನಡೆಸಿ ತಲೆಮರೆಸಿಕೊಂಡಿದ್ದ ನಕ್ಸಲರು ಶರಣಾಗಬೇಕಿರುವುದು ಸಂಬಂಧಪಟ್ಟ ಎಸ್ಪಿ ಕಚೇರಿ ಅಥವಾ ಸಬ್ ಇನ್ಸ್‍ಪೆಕ್ಟರ್ ಎದುರು. ಆದರೆ ಇಲ್ಲೇನಾಗುತ್ತಿದೆ? ಎಂದು ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

ಬುಧವಾರ ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಆರು ಕೋಟಿ ಕನ್ನಡಿಗರ ಮುಖ್ಯಮಂತ್ರಿ ತಮ್ಮ ಅಧಿಕೃತ ಕಚೇರಿಯಲ್ಲಿ ಆರು ಮಂದಿ ನಕ್ಸಲರನ್ನು ಸ್ವಾಗತಿಸಲು ನಡು ಬಗ್ಗಿಸಿ ನಿಂತಿದ್ದಾರೆ. ಕರ್ನಾಟಕದಲ್ಲಿ ಕಾನೂನಿನ ಕೊಲೆಯಾಗಿದೆ. ಸರಕಾರವೇ ಪ್ರಾಯೋಜಿಸಿದೆ ಎಂದು ಟೀಕಿಸಿದ್ದಾರೆ.

ನಕ್ಸಲ್ ವಿಕ್ರಮ್ ಗೌಡರನ್ನು ಎನ್‍ಕೌಂಟರ್ ಮಾಡಿದ ಪೊಲೀಸರ ದಿಟ್ಟ ಕ್ರಮಕ್ಕೆ ಸಿದ್ದರಾಮಯ್ಯ ಇಂದು ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ. ಮತ್ತು ಪೊಲೀಸರನ್ನ ಅಣಕಿಸುವ ರೀತಿ ರಾಜ್ಯದ ಮುಖ್ಯಮಂತ್ರಿ ನಡೆದುಕೊಂಡಿದ್ದಾರೆ. ಇಲ್ಲಿ ಯಾರ ಶರಣಾಗತಿ? ಸರಕಾರದ ಮುಂದೆ ನಕ್ಸಲರ ಶರಣಾಗತಿಯೋ? ಅಥವಾ ಬುದ್ದಿಜೀವಗಳ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ನಕ್ಸಲರಿಗೆ ಶರಣಾದರೊ? ಎಂದು ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News