ಕೆರೆ ಜಾಗ ಒತ್ತುವರಿ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ

Update: 2025-01-10 16:50 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಸರಕಾರಿ ಕೆರೆಯ ಜಮೀನನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ ಮೂರು ಮಂದಿ ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಅತ್ತಿಬೆಲೆ ಹೋಬಳಿ, ಹೆಬ್ಬಗೋಡಿ ಗ್ರಾಮದ ಸರ್ವೇ ನಂ.159 ರ 32 ಎಕರೆ 13 ಗುಂಟೆ ಸರ್ಕಾರಿ ಕೆರೆಯ ಜಮೀನನ್ನು ಆರೋಪಿ ಕೃಷ್ಣಪ್ಪ, ನಂಜಪ್ಪ, ರಾಮಯ್ಯ, ಎಂ.ವೆಂಕಟೇಶ್, ಹೆಚ್.ಎಂ.ಸುಬ್ಬಣ್ಣ, ಲಕ್ಷ್ಮೀದೇವಿ, ಪಿಳ್ಳಪ್ಪ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಶೌಚಾಲಯ ಮತ್ತು ವಾಸದ ಮನೆಗಳನ್ನು ನಿರ್ಮಾಣ ಮಾಡಿದ್ದರು. ಅವರ ವಿರುದ್ಧ ಬಿಎಂಟಿಎಫ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಬಿಎಂಟಿಎಫ್ ಪೊಲೀಸ್ ಠಾಣೆಯಲ್ಲಿ ತನಿಖೆ ಕೈಗೊಳ್ಳಲಾಗಿತ್ತು.

ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡು ಸಾಕ್ಷಾಧಾರಗಳನ್ನು ಮತ್ತು ದಾಖಲಾತಿಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು, ಘನ ನ್ಯಾಯಾಲಯವು ವಿಚಾರಣೆ ನಡೆಸಿರುತ್ತದೆ. ಈ ವಿಚಾರಣಾ ಕಾಲದಲ್ಲಿ ಆರೋಪಿಗಳು ಸರಕಾರಿ ಕೆರೆಯ ಸ್ವತ್ತನ್ನು ಅಕ್ರಮವಾಗಿ ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿರುವುದು ಧೃಡಪಟ್ಟಿದೆ.

ಹೀಗಾಗಿ ಆರೋಪಿಗಳಿಗೆ 1 ವರ್ಷ ಸಜೆ ಮತ್ತು 5 ಸಾವಿರ ರೂ. ದಂಡ ವಿಧಿಸಿ, ಮಾನ್ಯ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಬಿಎಂಟಿಎಫ್ ಪೆÇಲೀಸ್ ಇನ್ಸ್‍ಪೆಕ್ಟರ್ ಟಿ.ಡಿ ರಾಜು ತನಿಖೆ ಕೈಗೊಂಡು ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವುದರಿಂದ ಬಿಎಂಟಿಎಫ್‍ನ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News