ಬಿಎಂಟಿಸಿ ಬಸ್ಗೆ ಢಿಕ್ಕಿಯಾಗಿ ಹೊತ್ತಿ ಉರಿದ ಕಾರು
Update: 2023-12-04 11:22 GMT
ಬೆಂಗಳೂರು: ಬೆಂಗಳೂರಿನ ನಾಯಂಡಹಳ್ಳಿ ರಸ್ತೆಯಲ್ಲಿ ಬಿಎಂಟಿಸಿ ಸಾರಿಗೆ ಬಸ್ ಹಾಗೂ ಕಾರಿನ ಮದ್ಯೆ ಅಪಘಾತ ಸಂಭವಿಸಿದ್ದು, ಢಿಕ್ಕಿ ಹೊಡೆದಿದ್ದ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ, ಬಿಎಂಟಿಸಿ ಸಾರಿಗೆ ಬಸ್‌ನ ಹಿಂಭಾಗ ಬೆಂಕಿ ಹೊತ್ತಿಕೊಂಡು ಸೀಟುಗಳು ಸುಟ್ಟು ಕರಕಲಾಗಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿಗೆ ಸಣ್ಣ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ ಎಂದು ವರದಿಯಾಗಿದೆ.