ರಾಷ್ಟ್ರದ ಬೆಳವಣಿಗೆಯಲ್ಲಿ ಸೂಕ್ಷ್ಮ-ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರ : ವಿ.ಸೋಮಣ್ಣ

Update: 2024-11-16 16:26 GMT

ಬೆಂಗಳೂರು : ರಾಷ್ಟ್ರದ ಬೆಳವಣಿಗೆಗೆ ಅಪಾರ ಕೊಡುಗೆ ನೀಡುತ್ತಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳನ್ನು ಬೆಂಬಲಿಸುವುದು ಅತಿಮುಖ್ಯ ಎಂದು ಕೇಂದ್ರದ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ನಡೆದ ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ಮೋದಿ ಅವರ ಆಶಯದಂತೆ ಎಂಎಸ್ಎಂಇಗಳ ಬಲವರ್ಧನೆಯಾಗಿದ್ದು ಅವುಗಳ ವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಸಾರ್ವಜನಿಕ ವಲಯದ ಉದ್ಧಿಮೆಗಳು ಮತ್ತು ಇತರ ಸಂಸ್ಥೆಗಳೊಡನೆ ಎಂಎಸ್ಎಂಇಗಳ ಕಾರ್ಯಕ್ಷಮತೆಯನ್ನು ಪರಿಚಯಿಸುವುದಕ್ಕೆ ಈ ಕೈಗಾರಿಕಾ ಪ್ರದರ್ಶನವು ಹೆಚ್ಚು ಸಹಕಾರಿಯಾಗಲಿದೆ ಎಂದು ವಿ.ಸೋಮಣ್ಣ ಹೇಳಿದರು.

ಕಾರ್ಯಕ್ರಮದಲ್ಲಿ ಐ.ಇ.ಡಿ.ಎಸ್. ಜಂಟಿ ನಿರ್ದೇಶಕ ಡಾ.ಕೆ.ಸಾಕ್ರೇಟಿಸ್, ಯೋಜನೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಮುಹಮ್ಮದ್ ಅತೀಕುಲ್ಲಾ ಶರೀಫ್, ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News