ಎಸೆಸೆಲ್ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Update: 2024-02-20 09:59 GMT

ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.20: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆಗಳೂ ಮಾರ್ಚ್ 1ರಿಂದ 22ರ ವರೆಗೆ ಹಾಗೂ ಎಸೆಸೆಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿವೆ ಎಂದು ತಿಳಿಸಿದರು.

ಈ ವರ್ಷ ರಾಜ್ಯದಲ್ಲಿ 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಅದೇರೀತಿ ರಾಜ್ಯದಲ್ಲಿ ಈ ವರ್ಷ 8,96,271 ಮಕ್ಕಳು ಎಸೆಸೆಲ್ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. ಇದಕ್ಕಾಗಿ 2,741 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಂತಿದೆ

01-03-2024ರ - ಕನ್ನಡ ಹಾಗೂ ಅರಬಿಕ್ ಪರೀಕ್ಷೆ

04-03-2024 - ಗಣಿತ ಪರೀಕ್ಷೆ

05-03-2024 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 - ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಪರೀಕ್ಷೆ

07-03-2024 - ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 - ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ

11-03-2024 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 - ಇಂಗ್ಲಿಷ್ ಪರೀಕ್ಷೆ

15-03-2024 - ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 - ಅರ್ಥಶಾಸ್ತ್ರ ಪರೀಕ್ಷೆ

18-03-2024 - ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

20-03-2024 - ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

22-03-2024 - ಹಿಂದಿ ಪರೀಕ್ಷೆ

ಪರೀಕ್ಷೆಯು ಬೆಳಗ್ಗೆ 10:15ಕ್ಕೆ ಆರಂಭವಾಗಿ 1:30ಕ್ಕೆ ಮುಕ್ತಾಯಗೊಳ್ಳಲಿದೆ.


ಎಸೆಸೆಲ್ಸಿ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ...

25-03-2024 - ಪ್ರಥಮ ಭಾಷೆ ಪರೀಕ್ಷೆ (ಕನ್ನಡ,ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, +ಇಂಗ್ಲಿಷ್ NCERT)

27-03-2024 - ಸಮಾಜ ವಿಜ್ಞಾನ ಪರೀಕ್ಷೆ

30-03-2024 - ವಿಜ್ಞಾನ, ರಾಜ್ಯಶಾಸ್ತ್ರ ಪರೀಕ್ಷೆ

02-04-2024 - ಗಣಿತ, ಸಮಾಜಶಾಸ್ತ್ರ ಪರೀಕ್ಷೆ

03-04-2024 - ಅರ್ಥಶಾಸ್ತ್ರ ಪರೀಕ್ಷೆ

04-04-2024- ತೃತಿಯ ಭಾಷೆ (+ಹಿಂದಿ NCERT, ಹಿಂದಿ, ಕನ್ನಡ, ಇಂಗ್ಲಿಷ್, ಅರಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)

ಎನ್.ಎಸ್.ಕ್ಯೂ.ಎಫ್ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೊಬೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್, ಅಪೆರಲ್ ಮೇಡ್ ಅಪ್ಸ್ ಮತ್ತು ಹೋಂ ಫರ್ನಿಶಿಂಗ್, ಇಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ ವೇರ್.

06-04-2024- ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News