ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಟ್ವೀಟ್ : ವಿಜಯೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Update: 2024-06-21 16:34 GMT
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎರಡು ಪ್ರತ್ಯೇಕ ಎಫ್‌ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜೊತೆಗೆ ಮಲ್ಲೇಶ್ವರ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿದೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಹಾಗೂ ಟ್ವೀಟ್ ಮಾಡಿದ ಪ್ರಕರಣ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಬಿ.ವೈ.ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಚುನಾವಣೆ ವೇಳೆ ಮಾತನಾಡುವಾಗ ಮಾತಿನಲ್ಲಿ ಗೌರವ, ಸಂಯಮ ಹಾಗೂ ಸೌಜನ್ಯ ಇರಬೇಕು. ಪ್ರಧಾನಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರಿಗೆ ಗೌರವ ನೀಡಿ ಮಾತನಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಬುದ್ಧಿಮಾತು ಹೇಳಿ ವಿಚಾರಣೆ ಮುಂದೂಡಿದ್ದಾರೆ.