ಬೆಂಗಳೂರು| ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಹುಸಿ ಬಾಂಬ್ ಬೆದರಿಕೆ

Update: 2024-10-04 15:04 GMT

ಎಂ.ಎಸ್.ರಾಮಯ್ಯ ಕಾಲೇಜು (Photo credit: msrit.edu)

ಬೆಂಗಳೂರು: ನಗರದಲ್ಲಿರುವ ಮೂರು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಇಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿರುವುದಾಗಿ ವರದಿಯಾಗಿದೆ.

ಬಸವನಗುಡಿಯ ಬೆಂಗಳೂರು ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ಹಾಗೂ ಸದಾಶಿವನಗರದ ಎಂ.ಎಸ್.ರಾಮಯ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಕೂಡಲೇ ಕಾಲೇಜು ಆಡಳಿತ ಮಂಡಳಿಯವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಉಪ ಪೊಲೀಸ್ ಆಯುಕ್ತ(ದಕ್ಷಿಣ ವಿಭಾಗ) ಲೋಕೇಶ್ ಬಿ ಜಗಲಾಸರ್, ಬಾಂಬ್ ಬೆದರಿಕೆ ಸಂದೇಶ ಕುರಿತಾಗಿ ಪ್ರಕರಣ ದಾಖಲಿಸಿಕೊಂಡು ಇ-ಮೇಲ್ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News