ಬೆಂಗಳೂರಿನ ಮೂರು ಹೋಟೆಲ್‍ಗಳಿಗೆ ಹುಸಿ ಬಾಂಬ್ ಬೆದರಿಕೆ; ಪೊಲೀಸರಿಂದ ತಪಾಸಣೆ
ಬೆಂಗಳೂರು: ನಗರದ ಪ್ರತಿಷ್ಠಿತ ಮೂರು ಹೋಟೆಲ್‍ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ತಕ್ಷಣಕ್ಕೆ ಎಚ್ಚೆತ್ತುಕೊಂಡ ಪೊಲೀಸರು ಸ್ಥಳಗಳಲ್ಲಿ ತಪಾಸಣೆ ನಡೆಸಿದ ಬಳಿಕ ‘ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ’ ಎಂದು ತಿಳಿಸಿರುವುದು ವರದಿಯಾಗಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರತಿಷ್ಠಿತ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್‍ಗಳಿಗೆ ಬಾಂಬ್ ಬೆದರಿಕೆ ಇಮೇಲ್‍ಗಳು ಬಂದಿದೆ. ಮೇ 23ರ ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ.
ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸರಿಗೆ ಸಿಬ್ಬಂದಿ ಮಾಹಿತಿ ರವಾನಿಸಿದ್ದು, ತಕ್ಷಣಕ್ಕೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‍ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದರು.
ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದಿದ್ದು, ಯಾವುದೇ ಸ್ಪೋಟಕ, ಬಾಂಬ್‍ನಂತಹ ವಸ್ತುಗಳು ಪತ್ತೆಯಾಗಿಲ್ಲದ ಹಿನ್ನೆಲೆ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದ್ದಾರೆ.
ಈ ಸಂಬಂಧ ಆಗ್ನೇಯ ವಿಭಾಗದ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.
ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್‍ಗಳ ಮುಂದೆ, ಕೆಲವು ಗಂಟೆಗಳ ಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು.