ಕೆಎಸ್ಸಾರ್ಟಿಸಿಗೆ ಮೂರು ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Update: 2024-03-15 14:52 GMT

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ 2022-23ನೆ ಸಾಲಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳನ್ನು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಶುಕ್ರವಾರ ಪ್ರದಾನ ಮಾಡಲಾಯಿತು.

ಹೊಸದಿಲ್ಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿಗಳು, ಅನುರಾಗ್ ಜೈನ್, ಎಎಸ್‍ಆರ್‍ಟಿಯು ಅಧ್ಯಕ್ಷ ಡಾ.ಮಾಧವ್ ಖುಸೇಕರ್ ಸೇರಿದಂತೆ ಇನ್ನಿತರರು ಕೆಎಸ್ಸಾರ್ಟಿಸಿಯ ಹಿರಿಯ ಅಧಿಕಾರಿ ಯಶ್ವಂತ್ ಕುಮಾರ್ ಪಿ. ಅವರು ಸ್ವೀಕಾರ ಮಾಡಿದರು.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ನಿಗಮಕ್ಕೆ ‘ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಗಳ ಕಲ್ಯಾಣ’ಕ್ಕೆ ಕೈಗೊಂಡಿರುವ ವಿನೂತನ ಉಪಕ್ರಮಕ್ಕಾಗಿ ಎರಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಜತೆಗೆ ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ ಲಭಿಸಿರುತ್ತದೆ.

ಚಂಡೀಗಡನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಚೀಮಾ ಬಾಯ್ಲರ್ಸ್ ಲಿ. ಅಧ್ಯಕ್ಷ ಹಜಿರ್ಂದರ್ ಸಿಂಗ್ ಚೀಮಾ, ಪಂಜಾಬ್ ನಾಯಕತ್ವ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಹಿರಿಯ ಅಧಿಕಾರಿಗಳಾದ ಶ್ರೀನಿವಾಸಮೂರ್ತಿ ಸಿ., ಸ್ವರ್ಣ ಲತಾ ಎಂ. ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕಾರ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News