ಡಿ.9ರಂದು ಸುವರ್ಣಸೌಧದಲ್ಲಿ "ಅನುಭವ ಮಂಟಪ"ದ ತೈಲವರ್ಣ ಚಿತ್ರ ಅನಾವರಣ

Update: 2024-12-07 16:18 GMT

ಬೆಂಗಳೂರು : ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ವಿಶ್ವದ ಮೊದಲ ಸಂಸತ್ತು ಎಂಬ ಖ್ಯಾತಿಯ ʼಅನುಭವ ಮಂಟಪʼದ ಬೃಹತ್ ತೈಲವರ್ಣ ಚಿತ್ರವು ಚಳಿಗಾಲ ಅಧಿವೇಶನದ ಮೊದಲ ದಿನ ಡಿ.9ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಅನಾವರಣಗೊಳ್ಳಲಿದೆ.

ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಐತಿಹಾಸಿಕ ಕ್ಷಣಕ್ಕೆ ಬೆಳಗಾವಿಯ ಸುವರ್ಣ ಸೌಧ ದಾಖಲಾಗಲಿದೆ. ತೈಲವರ್ಣ ಚಿತ್ರದ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹಾಗೂ ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಪ್ರಜಾಪ್ರಭುತ್ವದ ಮೂಲ ಆಶಯಗಳು, ಸಮಾನತೆ, ಮಾನವೀಯ ಸಂದೇಶಗಳನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಹಾಗೂ ಮಹಾತ್ಮಾ ಗಾಂಧೀಜಿಯವರು ಅಧಿವೇಶನದಲ್ಲಿ ಪಾಲ್ಗೊಂಡ ಶತಮಾನೋತ್ಸವದ, ಸ್ಮರಣಾರ್ಥವಾಗಿ ಈ ಕಾರ್ಯಕ್ರಮ ನಡೆಯಲಿದೆ. ಕ್ಯಾನ್ವಾಸ್ ಮೇಲೆ ತೈಲ ವರ್ಣದಲ್ಲಿ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರಕ್ಕೆ ಕಲಾವಿದರಾದ ಬೆಂಗಳೂರು ಚಿತ್ರಕಲಾ ಪರಿಷತ್ ನ ಸತೀಶ್ ರಾವ್ ಶಿವಮೊಗ್ಗ, ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಅಶೋಕ್ ಯು, ಜಗಳೂರು ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ.ಆರ್, ವೀರಣ್ಣ ಮಡಿವಾಳಪ್ಪ ಬಬ್ಲಿ, ಬೈಲಹೊಂಗಲ, ಮಹೇಶ ನಿಂಗಪ್ಪ, ದಫಲಾಪುರ, ಜಮಖಂಡಿ ಅವರು ಜೀವಂತಿಕೆ ತುಂಬಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News