ಸಿಎಂ ಅನುಪಸ್ಥಿತಿ ಆಕ್ಷೇಪಿಸಿ ವಿಪಕ್ಷ ನಾಯಕರಿಂದ ಗದ್ದಲ: ಸದನ ಮುಂದೂಡಿಕೆ

Update: 2024-07-16 06:44 GMT

ಬೆಂಗಳೂರು, ಜು.16: ಸದನದಲ್ಲಿ ಮುಖ್ಯಮಂತ್ರಿಯ ಅನುಪಸ್ಥಿತಿಗೆ ವಿಪಕ್ಷ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಸದನವನ್ನು ಸ್ಪೀಕರ್ ಯು.ಟಿ.ಖಾದರ್ 10 ನಿಮಿಷಗಳ ಕಾಲ ಮುಂದೂಡಿದ್ದಾರೆ.

ಇಂದು ಬೆಳಗ್ಗೆ ಸದನ ಸಮಾವೇಶಗೊಂಡು ಪ್ರಶ್ನೋತ್ತರ ಅವಧಿ ಮುಗಿದ ಬಳಿಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಲು ಮುಂದಾದ ವೇಳೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಗೈರಿಗೆ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ಷೇಪ ವ್ಯಕ್ತಪಡಿಸಿದರು.

ಈ ಹಗರಣದಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಮೇಲೆಯೇ ನೇರ ಆರೋಪ ಇರುವುದರಿಂದ ವಿಪಕ್ಷ ನಾಯಕರ ಚರ್ಚೆ ವೇಳೆ ಅವರು ಸದನದಲ್ಲಿ ಹಾಜರಿರಬೇಕಿತ್ತು. ಅವರನ್ನು ಕರೆಯಿಸಿ ಎಂದು ಅಶ್ವತ್ಥನಾರಾಯಣ ಒತ್ತಾಯಿಸಿದರು.

ಇದರಿಂದ ಕೆರಳಿದ ಆಡಳಿತ ಪಕ್ಷದ ಸದಸ್ಯರು ಎದ್ದು ನಿಂತು ಪ್ರತಿದಾಳಿ ನಡೆಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಕೆ.ಜಾರ್ಜ್, ಝಮೀರ್ ಅಹ್ಮದ್ ಖಾನ್, ಪ್ರಿಯಾಂಕ್ ಖರ್ಗೆ ಮತ್ತಿತರು ಪ್ರತಿಪಕ್ಷ ನಾಯಕರ ಜೊತೆ ವಾಗ್ವಾದಕ್ಕಿಳಿದರು. ಆಡಳಿತ-ವಿಪಕ್ಷ ನಡುವೆ ವಾಗ್ವಾದ ತೀವ್ರಗೊಳ್ಳುತ್ತಿದ್ದಂತೆ ಸ್ಪೀಕರ್ ಯು.ಟಿ.ಖಾದರ್ ಅವರು ಸದನವನ್ನು ಮುಂದೂಡಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News