ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣ | ಮತ್ತೊಬ್ಬ ಆರೋಪಿ ವಶಕ್ಕೆ

Update: 2024-06-25 13:16 GMT

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ವಿಚಾರ ಸಂಬಂಧ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್‍ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಸಾಯಿತೇಜ ಎಂಬಾತನನ್ನು ವಶಕ್ಕೆ ಪಡೆದಿರುವ ಎಸ್‍ಐಟಿ ಅಧಿಕಾರಿಗಳು ಆತನನ್ನು ಬೆಂಗಳೂರಿಗೆ ಕರೆತಂದಿರುವುದಾಗಿ ಮೂಲಗಳು ತಿಳಿಸಿವೆ.

ಆತ್ಮಹತ್ಯೆಗೊಳಗಾದ ನಿಗಮದ ಅಧಿಕಾರಿ ಚಂದ್ರಶೇಖರ್ ಬರೆದಿದ್ದ ಡೆತ್‍ನೋಟ್‍ನಲ್ಲಿ ಸಾಯಿತೇಜ ಎಂಬುವನ ಹೆಸರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್‍ಐಟಿ ಅಧಿಕಾರಿಗಳು ಸಾಯಿತೇಜ ಅವರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿರುವುದಾಗಿ ತಿಳಿದುಬಂದಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News