ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಬಂಧಿತರ ಸಂಖ್ಯೆ 5ಕ್ಕೆ ಏರಿಕೆ

Update: 2024-06-05 16:04 GMT

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್‌ಐಟಿ ತನಿಖಾಧಿಕಾರಿಗಳು ಇಬ್ಬರನ್ನು ಬಂಧಿಸಿದ್ದು, ಈ ಮೂಲಕ ಪ್ರಕರಣದಲ್ಲಿ ಈವರೆಗೂ ಐವರನ್ನು ಬಂಧಿಸಿದಂತಾಗಿದೆ.

ನೆಕ್ಕುಂಟಿ ನಾಗರಾಜ್, ಇವರ ಸ್ನೇಹಿತ ನಾಗೇಶ್ ಎಂಬುವರನ್ನು ಬಂಧಿಸಲಾಗಿದ್ದು, ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ್ದ 94.73 ಕೋಟಿ ರೂ.ಗಳನ್ನು ಯೂನಿಯನ್ ಬ್ಯಾಂಕ್ ಖಾತೆಗಳ ಮೂಲಕ ಅಕ್ರಮವಾಗಿ ವರ್ಗಾಯಿಸಲು ನಾಗರಾಜ್ ಹಾಗೂ ನಾಗೇಶ್ ಸಂಚು ನಡೆಸಿದ್ದಾರೆ ಎನ್ನಲಾಗಿದೆ. ಜತೆಗೆ, ಪರಿಶಿಷ್ಠ ಜಾತಿ ಪರಿಶಿಷ್ಠ ವರ್ಗಗಳ ಇಲಾಖೆ ಸಚಿವರಾಗಿರುವ ನಾಗೇಂದ್ರ ಅವರ ಆಪ್ತ ಸಹಾಯಕನಾಗಿದ್ದಾರೆ ಎಂದೂ ಹೇಳಲಾಗುತ್ತಿದೆ.

ಮತ್ತೊಂದೆಡೆ, ಪ್ರಕರಣದಲ್ಲಿ ತೆಲಂಗಾಣದ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಇ.ಸತ್ಯನಾರಾಯಣ್ ಎಂಬಾತನನ್ನು ಬಂಧಿಸಿ ಜೂ.12ರವರೆಗೆ ಹೆಚ್ಚಿನ ಕಸ್ಟಡಿಗೆ ಪಡೆಯಲಾಗಿದೆ. ಈತ ಹಣ ಅಕ್ರಮ ವರ್ಗಾವಣೆ ಕೃತ್ಯದಲ್ಲಿ ಭಾಗಿಯಾಗಿರುವುದರ ಕುರಿತು ಪುರಾವೆಗಳು ಲಭ್ಯವಾಗಿರುವುದರಿಂದ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News