ಸಿದ್ದರಾಮಯ್ಯನವರೇ, ನೀವು ಸಿಎಂ ಆದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ : ವಿಜಯೇಂದ್ರ

Update: 2025-04-17 18:19 IST
ಸಿದ್ದರಾಮಯ್ಯನವರೇ, ನೀವು ಸಿಎಂ ಆದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ : ವಿಜಯೇಂದ್ರ
  • whatsapp icon

ಬಾಗಲಕೋಟೆ : ‘ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಗುರುವಾರ ನಗರದಲ್ಲಿ ಬಿಜೆಪಿ ಏರ್ಪಡಿಸಿದ್ದ ಜನಾಕ್ರೋಶ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ. ಸಿದ್ದರಾಮಯ್ಯನವರೇ, ನೀವು ಸಿಎಂ ಆದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹೆಣ್ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಜನರು ನಿಮ್ಮನ್ನು ನೆನಪಿಸಿಕೊಳ್ಳಬೇಕೇ? ಎಂದು ಕೇಳಿದರು.

ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‌ ಫಾರ್ಮರ್ ಹಾಕಿಸಲು 25 ಸಾವಿರ ರೂ.ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ.ಕಟ್ಟಬೇಕಿದೆ. ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ ಸಿದ್ದರಾಮಯ್ಯನವರೇ. ಹಿಂದಿನ ಬಾರಿ ವೀರಶೈವ ಧರ್ಮ ಎಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಲ್ಲವೇ ಎಂದು ಆಕ್ಷೇಪಿಸಿದರು.

ಮುಸ್ಲಿಮರಿಗೆ ಸರಕಾರಿ ಕಾಮಗಾರಿಯಲ್ಲಿ ಶೇ.4ರಷ್ಟು ಮೀಸಲಾತಿ ಕೊಡುತ್ತಿದ್ದೀರಿ. ಯಾರಪ್ಪನ ದುಡ್ಡು ಸ್ವಾಮಿ. ಮುಸ್ಲಿಮರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ರೂ.ಕೊಡುತ್ತಾರಂತೆ. ಹಿಂದೂಗಳಲ್ಲಿ ಬಡವರಿಲ್ಲವೇ? ಮುಸ್ಲಿಮ್ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ರೂ. ನೀಡುವುದಾಗಿ ಹೇಳಿದ್ದೀರಿ. ಹಿಂದೂಗಳಲ್ಲಿ ಬಡವರಿಲ್ಲವೇ ಹಾಗಿದ್ದರೆ ಎಂದು ವಾಗ್ದಾಳಿ ನಡೆಸಿದರು.

‘ಸಿದ್ದರಾಮಯ್ಯನವರೇ, ತಮಿಳುನಾಡಿನಲ್ಲಿ ನಿಮ್ಮ ಚಿನ್ನತಂಬಿ ಎಂ.ಕೆ.ಸ್ಟ್ಯಾಲಿನ್ ಪೆಟ್ರೋಲ್ ಮತ್ತು ಡೀಸೆಲ್ ತೇರಿಗೆಯನ್ನು 3 ರೂ.ಕಡಿತಗೊಳಿಸಿದ ರೀತಿ ನೀವೇಕೆ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು 10 ರೂ. ಕಡಿತಗೊಳಿಸಬಾರದು. ಅಂದ ಹಾಗೆ ಕರ್ನಾಟಕದಲ್ಲಿ ನಿಮ್ಮ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬುದನ್ನು ಈ ಮೂಲಕ ನೆನಪಿಸಲು ಇಚ್ಛಿಸುತ್ತೇವೆ’

-ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News