ನೀತಿ ಸಂಹಿತೆ ಉಲ್ಲಂಘನೆ: ಬಿಬಿಎಂಪಿ ವ್ಯಾಪ್ತಿಯಲ್ಲಿ 240 ಎಫ್‍ಐಆರ್ ದಾಖಲು

Update: 2024-03-25 21:53 IST
ನೀತಿ ಸಂಹಿತೆ ಉಲ್ಲಂಘನೆ: ಬಿಬಿಎಂಪಿ ವ್ಯಾಪ್ತಿಯಲ್ಲಿ 240 ಎಫ್‍ಐಆರ್ ದಾಖಲು
  • whatsapp icon

ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದವರಿಂದ ಎರಡು ಕೋಟಿ ರೂ.ಗೂ ಅಧಿಕ ಮೌಲ್ಯದ ಮದ್ಯ, ಡ್ರಗ್ಸ್, ಚಿನ್ನ, ನಗದನ್ನು ಜಪ್ತಿ ಮಾಡಲಾಗಿದೆ. ಹಾಗೆಯೇ ಮಾ.16ರಿಂದ ಇಂದಿನವರೆಗೂ ಸುಮಾರು 240 ಎಫ್‍ಐಆರ್ ದಾಖಲಾಗಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಚುನಾವಣಾ ನೀತಿ ಸಂಹಿತೆಯು ಜಾರಿಯಾದ ಹಿನ್ನೆಲೆಯಲ್ಲಿ ಅಕ್ರಮವಾಗಿ ನಗದು, ಮದ್ಯ, ಡ್ರಗ್ಸ್, ಚಿನ್ನ ಸಾಗಾಟವನ್ನು ನಿಯಂತ್ರಿಸಲು ಚೆಕ್‍ಪೋಸ್ಟ್ ಗಳನ್ನು ತೆರೆಯಲಾಗಿದೆ. 30,908 ಲೀಟರ್ ಮದ್ಯೆ, 21.99 ಕೆ.ಜಿ. ಡ್ರಗ್ಸ್, 18 ಕೆಜಿ. ಚಿನ್ನ, ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 22 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಬಿಬಿಎಂಪಿ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News