ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ಕನಕಶ್ರೀ ಪ್ರಶಸ್ತಿ ಪ್ರದಾನ

Update: 2024-11-18 16:53 GMT

ಬೆಂಗಳೂರು : ಸಂತ್ರಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಮಾಡುವ 2024ನೇ ಸಾಲಿನ ಪ್ರತಿಷ್ಠಿತ ಕನಕ ಶ್ರೀ ಪ್ರಶಸ್ತಿಯನ್ನು ಬಳ್ಳಾರಿಯ ವ್ಯಾಸನಕೆರೆ ಪ್ರಭಾಂಜನಚಾರ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

ಸೋಮವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಸಿದ್ದರಾಮಾನಂದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಉದ್ಘಾಟಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಾಹಿತಿಗಳಾದ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಡಾ.ಬಂಜಗೆರೆ ಜಯಪ್ರಕಾಶ್, ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ, ಕುರುಬರ ಸಂಘದ ಅಧ್ಯಕ್ಷ ಎಂ.ಈರಣ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News