ಸತೀಶ್ ಜಾರಕಿಹೊಳಿ ಔತಣಕೂಟದ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Update: 2025-01-06 15:39 GMT

ಸಿದ್ದರಾಮಯ್ಯ 

ಬೆಂಗಳೂರು : ಹೊಸ ವರ್ಷದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಪಕ್ಷವನ್ನು ಬಲವರ್ಧನೆಗೊಳಿಸುವ ಕುರಿತು ಮಾತುಕತೆ ನಡೆಯಿತೇ ಹೊರತು, ಬೇರೆ ಯಾವುದೇ ರಾಜಕೀಯ ವಿಚಾರಗಳು ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು, ಸಚಿವರು ಒಂದು ಕಡೆ ಸೇರಿ ಊಟ ಮಾಡಿದರೆ ಮಾಧ್ಯಮಗಳಿಗೆ ಅದೇ ದೊಡ್ಡ ಸುದ್ದಿಯಾಗುತ್ತಿದೆ. ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದಂತಹ ಔತಣಕೂಟದ ಕುರಿತು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾದದ್ದು. ಊಹಾ ಪತ್ರಿಕೋದ್ಯಮ ಬಹಳ ಅಪಾಯಕಾರಿ ಎಂದು ಹೇಳಿದರು.

ಸಚಿವ ಕೆ.ಎನ್.ರಾಜಣ್ಣ ಔತಣಕೂಟದ ಕುರಿತು ಏನು ಹೇಳಿಕೆ ನೀಡಿದ್ದಾರೋ ನನಗೆ ಗೊತ್ತಿಲ್ಲ. ಆದರೆ, ಅಲ್ಲಿ ಯಾವುದೇ ರಾಜಕೀಯ ವಿಚಾರಗಳನ್ನು ನಾವು ಚರ್ಚೆ ಮಾಡಿಲ್ಲ. ಸತೀಶ್ ಜಾರಕಿಹೊಳಿ ನನ್ನನ್ನು, ಮಹದೇವಪ್ಪ ಹಾಗೂ ಪರಮೇಶ್ವರ್ ಅವರನ್ನು ಊಟಕ್ಕೆ ಕರೆದಿದ್ದರು. ನಾವೆಲ್ಲ ಹೋಗಿದ್ದೆವು. ಪರಮೇಶ್ವರ್ ವಿದೇಶ ಪ್ರವಾಸಕ್ಕೆ ತೆರಳಬೇಕಿದ್ದರಿಂದ, ಊಟ ಮಾಡದೆ ಹಾಗೆ ಹೊರಟರು. ನಾವು ಮೂವರು ಜೊತೆಯಲ್ಲಿ ಊಟ ಮಾಡಿದೆವು ಎಂದು ಮುಖ್ಯಮಂತ್ರಿ ತಿಳಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News