ದಿಲ್ಲಿ ವಿಧಾನಸಭಾ ಚುನಾವಣೆ: ಸಚಿವ ಝಮೀರ್ ಅಹ್ಮದ್ ಪ್ರಚಾರ
Update: 2025-01-31 23:48 IST

ಬೆಂಗಳೂರ : ದಿಲ್ಲ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಸ್ತಫಾಬಾದ್ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಲಿ ಮೆಹದಿ ಪರ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಶುಕ್ರವಾರ ಪ್ರಚಾರ ನಡೆಸಿದರು.
ಇದೇ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರು ಝಮೀರ್ ಅಹ್ಮದ್ ಖಾನ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಚುನಾವಣಾ ಪ್ರಚಾರದ ಬಳಿಕ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಝಮೀರ್ ಅಹ್ಮದ್ ಖಾನ್ ಭೇಟಿ ಮಾಡಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಲಿ ಮೆಹದಿ, ವಿಧಾನಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್, ರಾಜ್ಯ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಕೆ.ಅನ್ವರ್ ಬಾಷಾ, ಮುಖಂಡ ಸಿರಾಜ್ ಉಪಸ್ಥಿತರಿದ್ದರು.