ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದ ಸಚಿವ ಝಮೀರ್ ಅಹ್ಮದ್ ಖಾನ್
Update: 2024-04-03 09:25 GMT
ಬೆಂಗಳೂರು: ಕೇರಳ ಪ್ರವಾಸದಲ್ಲಿರುವ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಮಂಗಳವಾರ ಕ್ಯಾಲಿಕಟ್ ನಲ್ಲಿ ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರ ಮರ್ಕಝ್ ಜ್ಞಾನ ನಗರಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಲಕ್ಷಾಂತರ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಎ.ಪಿ.ಉಸ್ತಾದ್ ಅವರ ಸೇವೆಯನ್ನು ಝಮೀರ್ ಅಹ್ಮದ್ ಖಾನ್ ಶ್ಲಾಘಿಸಿದರು. ಸಮಾಜ ಸೇವೆ, ಸಮುದಾಯದ ಪರ ಕಾಳಜಿ, ಬಡವರಿಗೆ ಸಹಾಯ ಮಾಡುವ ಝಮೀರ್ ಅಹ್ಮದ್ ಖಾನ್ ಗುಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಎ.ಪಿ.ಉಸ್ತಾದ್, ಬಡವರ ಪರವಾಗಿ ಕೆಲಸ ಮಾಡಲು ಅಲ್ಲಾಹ್ ಮತ್ತಷ್ಟು ಶಕ್ತಿ ನೀಡಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ, ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಅನ್ವರ್ ಬಾಷಾ, ಸದಸ್ಯ ಯಾಕೂಬ್, ವಿಷನ್ ಗ್ರೂಪ್ ಅಧ್ಯಕ್ಷ ನೌಫಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.