ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಝಮೀರ್ ಅಹ್ಮದ್‌ ಖಾನ್

Update: 2025-02-03 23:27 IST
Photo of Metting
  • whatsapp icon

ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ಅವರು ಬಜೆಟ್ ಪೂರ್ವಭಾವಿಯಾಗಿ ಕ್ರೈಸ್ತ, ಸಿಖ್, ಬೌದ್ಧ ಹಾಗೂ ಜೈನ ಸಮುದಾಯದ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡಿರುವಂತೆ ಜೈನ, ಬೌದ್ಧ ಹಾಗೂ ಸಿಖ್ ಸಮುದಾಯದ ಅಭಿವೃದ್ಧಿಗೆ ನಿಗಮ ಅಥವಾ ಮಂಡಳಿ ಸ್ಥಾಪನೆ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿದರು. ಜತೆಗೆ ಬಜೆಟ್‍ನಲ್ಲಿ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಝಮೀರ್ ಅಹಮದ್ ಖಾನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಎಲ್ಲ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಬದ್ಧವಾಗಿದೆ. ಸಿಎಂ ಜತೆ ಚರ್ಚಿಸಿ ನಿಮ್ಮ ಬೇಡಿಕೆಗೆ ಸ್ಪಂದಿಸಲಾಗುವುದು. ಈ ಬಾರಿಯ ಬಜೆಟ್‍ನಲ್ಲಿ ಹೆಚ್ಚು ಅನುದಾನಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News