ನಾಳೆ(ಡಿ.17) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Update: 2024-12-16 19:03 GMT
ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಮಹಾ ಅಧಿವೇಶನಕ್ಕೆ 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ‘ಗಾಂಧಿ ಭಾರತ’ ಕಾರ್ಯಕ್ರಮದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.17ರಂದು ಸಂಜೆ 6 ಗಂಟೆಗೆ ನಗರದ ಖಾಸಗಿ ಹೊಟೇಲ್‍ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.
ಅಲ್ಲದೇ, ಇತ್ತೀಚೆಗೆ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟ, ವಕ್ಫ್ ವಿಚಾರದಲ್ಲಿ ಬಿಜೆಪಿ ನಡೆಸುತ್ತಿರುವ ಹೋರಾಟ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ.