ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯು
ಬೆಳಗಾವಿ : ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್) ಆಸ್ಪತ್ರೆ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಮೃತ ಬಾಣಂತಿಯನ್ನು ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ(25) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಡಿ.24ರಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಪೂಜಾ ದಾಖಲಾಗಿದ್ದರು. ನಿನ್ನೆ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದು, ಬಳಿಕ ಮೂರ್ಚೆ ರೋಗ (ಫಿಟ್ಸ್) ಬಂದು ಮೃತಪಟ್ಟಿರುವುದಾಗಿ ಪೂಜಾ ಸಂಬಂಧಿಕರಿಗೆ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ನಡೆಸದೇ ತರಾತುರಿಯಲ್ಲಿ ಬಾಣಂತಿಯ ಶವವನ್ನು ಕೊಟ್ಟು ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.
ಡಿ.24ರಂದು ಪೂಜಾ ಎಂಬುವರು ಆಸ್ಪತ್ರೆಗೆ ದಾಖಲಾಗಿದ್ದರು. ಪೂಜಾಗೆ ಮೂವರು ಮಕ್ಕಳಾಗಿದ್ದು ಒಂದು ಶಸ್ತ್ರ ಚಿಕಿತ್ಸೆ ಆಗಿತ್ತು. ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಬಂದಾಗಲೇ ಪೂಜಾ ಅವರಿಗೆ ಪ್ರಜ್ಞೆ ಇರಲಿಲ್ಲ. ಕೂಡಲೇ ಅವರನ್ನು ನಾವು ತುರ್ತುನಿಗಾ (ಐಸಿಯು) ಘಟಕಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಿದ್ದು, ಅಸುನೀಗಿದ್ದಾರೆಂದು ವೈದ್ಯಕೀಯ ಮೂಲಗಳು ತಿಳಿಸಿವೆ.