ಸಿದ್ದರಾಮಯ್ಯ, ಡಿಕೆಶಿ ಜೊತೆ ಹೊಂದಾಣಿಕೆಗೆ ನಿಮ್ಮನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿಲ್ಲ: ವಿಜಯೇಂದ್ರ ವಿರುದ್ಧ ಅರವಿಂದ ಲಿಂಬಾವಳಿ ವಾಗ್ದಾಳಿ

Update: 2024-12-01 18:27 GMT

ಅರವಿಂದ ಲಿಂಬಾವಳಿ 

ಬೆಳಗಾವಿ : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ನಿಮ್ಮನ್ನು ಅಧ್ಯಕ್ಷ ಮಾಡಿಲ್ಲ‌ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮಾಜಿ ಸಚಿವ ಅರವಿಂದ ಲಿಂಬಾವಳಿ ವಾಗ್ದಾಳಿ ನಡೆಸಿದ್ದಾರೆ.

ನಗರದ ಗಾಂಧಿ ಭವನದಲ್ಲಿ ವಕ್ಫ್​ ಭೂ ಕಬಳಿಕೆ ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಎಂದು ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ. ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ನಾವು ವಿರೋಧ ಪಕ್ಷಕ್ಕೆ ಬಂದಿದ್ದೇವೆ ಎಂದು ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಕ್ಫ್‌ ಮಂಡಳಿಯ ಭೂಕಬಳಿಕೆ ವಿರುದ್ಧದ ಹೋರಾಟ ಜನಪರವಾದದ್ದು. ಇದರ ನೇತೃತ್ವ ವಹಿಸಿದ ಬಸನಗೌಡ ಪಾಟೀಲ್​ ಯತ್ನಾಳ್​ ಅವರನ್ನು ಪಕ್ಷದಿಂದ ಉಚ್ಚಾಟಿಸುತ್ತೇನೆ ಎಂದು ಹೇಳುತ್ತೀರಾ?. ನಾವು ಪಕ್ಷ ಕಟ್ಟಿದವರು. ಜನರ ಪರವಾಗಿ ನಾವು ಧ್ವನಿ ಎತ್ತುತ್ತಿದ್ದೇವೆ. ಇದಕ್ಕೆ ಜನ ವಿರೋಧಿ ಅಂತಿರಿ, ಇದಕ್ಕೆ ನಗಬೇಕಾ ಅಳಬೇಕಾ ಎಂದು ಗೊತ್ತಾಗುತ್ತಿಲ್ಲ. ಲೋಕಸಭೆಯಲ್ಲಿ 7 ಸೀಟು ಸೋತರೂ ಯಡಿಯೂರಪ್ಪ ಆತ್ಮಾವಲೋಕನ ಮಾಡಿಕೊಳ್ಳಲಿಲ್ಲ. ಯಾರಿಗೂ ಕರೆ ಮಾಡಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News