ಬೆಳಗಾವಿ | ಪ್ರೀತಿಗೆ ವಿರೋಧ : ಪ್ರೇಯಸಿಯ ತಾಯಿ-ಮಗನ ಹತ್ಯೆ

Update: 2024-12-05 18:20 GMT
ಸಾಂದರ್ಭಿಕ ಚಿತ್ರ

ಬೆಳಗಾವಿ : ಪ್ರೀತಿಗೆ ಅಡ್ಡಿಯಾಗಿದ್ದಾರೆ ಎಂದು ಪ್ರಿಯಕರನೊಬ್ಬ ಪ್ರೇಯಸಿಯ ತಾಯಿ ಮತ್ತು ಆಕೆಯ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ನಡೆದಿದೆ.

ತಾಯಿ ಮಂಗಲ ನಾಯಕ(45) ಮತ್ತು ಪುತ್ರ ಪ್ರಜ್ವಲ್ ನಾಯಕ ಅವರನ್ನು ಆರೋಪಿ ರವಿ ಖಾನಾಪಗೋಳ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಹತ್ಯೆಯ ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದ ನಿಪ್ಪಾಣಿ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.

ಅಲ್ಲದೆ ಗ್ರಾಮಸ್ಥರ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಮಂಗಲ ನಾಯಕ ಪುತ್ರಿಯನ್ನು ರವಿ ಪ್ರೀತಿಸುತ್ತಿದ್ದ. ಆದರೆ ಇದಕ್ಕೆ ಮಂಗಲ ವಿರೋಧಿಸಿದ್ದರು. ಇದರಿಂದ ಕೋಪಗೊಂಡು ಇಬ್ಬರನ್ನು ಹತ್ಯೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News