ಬೆಳಗಾವಿ | ಸಂಕ್ರಾಂತಿ ಹಬ್ಬಕ್ಕೆ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಹತ್ಯೆ ಮಾಡಿದ ಅಳಿಯ

Update: 2025-01-14 11:53 GMT

ರೇಣುಕಾ ಶ್ರೀಧರ ಪದಮುಕಿ/ಶುಭಂ ದತ್ತಾ ಬಿರ್ಜೆ

ಬೆಳಗಾವಿ : ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಡುಗೆ ಮಾಡಿಕೊಂಡು ಬುತ್ತಿ ಕಟ್ಟಿಕೊಂಡು ಮಗಳಿಗೆ ಕೊಡಲು ಬಂದಿದ್ದ ಅತ್ತೆಯನ್ನು ಅಳಿಯನೇ ಹತ್ಯೆ ಮಾಡಿರುವಂತಹ ಘಟನೆ ಬೆಳಗಾವಿ ನಗರದ ಖಾಸಬಾಗ್​ನಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪದಮುಕಿ(43) ಎಂದು ಗುರುತಿಸಲಾಗಿದೆ. ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ(24) ಹತ್ಯೆ ಆರೋಪಿ ಎಂದು ತಿಳಿದು ಬಂದಿದೆ.

ಹಬ್ಬದ ಹಿನ್ನೆಲೆಯಲ್ಲಿ ಮಗಳಿಗೆ ಸಂಕ್ರಾಂತಿ ಹಬ್ಬದೂಟ ಕೊಡುವುದಕ್ಕೆ ಅವರ ತಾಯಿ ಮನೆಗೆ ಬಂದಿದ್ದರು. ಆದರೆ, ಈ ವೇಳೆ ಹಣ ಕೊಡಲಿಲ್ಲವೆಂದು ಮಗಳ ಗಂಡನೇ ಅತ್ತೆಗೆ ಚಾಕುವಿನಿಂದ ಇರಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ತೀವ್ರ ರಕ್ತ ಸ್ರಾವವಾಗಿ ಮನೆಯಲ್ಲೇ ಮೃತಪಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿದ್ದು, ಪರಿಶೀಲಿಸಿದ್ದಾರೆ. ಶಹಾಪುರ ಪೊಲೀಸ್ ಠಾಣೆ ಪೊಲೀಸರು ಆರೋಪಿ ಶುಭಂ ಬಿರ್ಜೆ ಹಾಗೂ‌ ಅವರ ತಂದೆ-ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News