ಬೆಳಗಾವಿ : ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯು

Update: 2025-01-28 14:33 IST
ಬೆಳಗಾವಿ : ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯು
  • whatsapp icon

ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ಬಾಣಂತಿಯನ್ನು ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಅಂಜಲಿ ಪಾಟೀಲ್ (31) ಎಂದು ಗುರುತಿಸಲಾಗಿದೆ.

ಅಂಜಲಿಗೆ ವೈದ್ಯರು ಜನವರಿ 22ಕ್ಕೆ ಹೆರಿಗೆಗೆ ‌ದಿನಾಂಕ ನೀಡಿದ್ದರು. ಆದರೆ ಹೆರಿಗೆ ನೋವು ಕಾಣಿಸದ ಹಿನ್ನೆಲೆ ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಸೇರಿಯನ್ ಮೂಲಕ ಹೆರಿಗೆ ನಡೆದ ಬಳಿಕ ಅಂಜಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಂಜಲಿ ಕುಟುಂಬಸ್ಥರು ವೈದ್ಯರ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News