ಬೆಳಗಾವಿ | ಘಟಪ್ರಭಾ ನದಿಗೆ ಉರುಳಿದ 13 ಮಂದಿಯಿದ್ದ ಟ್ರ್ಯಾಕ್ಟರ್: ಓರ್ವ ನೀರುಪಾಲು

Update: 2024-06-09 07:18 GMT

ಬೆಳಗಾವಿ, ಜೂ.9: ಕಾರ್ಮಿಕರು ಸಂಚರಿಸುತ್ತಿದ್ದ ಟ್ರ್ಯಾಕ್ಟರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿರುವ ಘಟಪ್ರಭಾ ನದಿಗೆ ಉರುಳಿಬಿದ್ದ ಘಟನೆ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ನೀರುಪಾಲಾಗಿ ನಾಪತ್ತೆಯಾಗಿದ್ದರೆ, 13 ಮಂದಿ ಈಜಿ ದಡ ಸೇರಿದ್ದಾರೆ.

ಕಾರ್ಮಿಕರು ಬಾಗಲಕೋಟೆ ಜಿಲ್ಲೆಯ ನಂದಗಾಂವ್ ಗ್ರಾಮದಿಂದ ಮೂಡಲಗಿ ತಾಲೂಕಿನ ಅವರಾದಿ ಗ್ರಾಮಕ್ಕೆ ತೆರಳುತ್ತಿದ್ದರು. ಅವರಾದಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಕಟ್ಟಲಾಗಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಘಟಪ್ರಭಾ ನದಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಮೇಲೆ ಮೂರು ಅಡಿ ನೀರು ಹರಿಯುತ್ತಿದೆ. ಈ ವೇಳೆ ಬ್ರಿಡ್ಜ್ ಮೇಲೆ ಸಂಚರಿಸಿದ ಟ್ರ್ಯಾಕ್ಟರ್ ನೀರಿನ ಸೆಳೆತಕ್ಕೆ ಸಿಲುಕಿ ನದಿಗೆ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಸ್ಥಳಕ್ಕೆ ಕುಲಗೋಡ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟಪ್ರಭಾ ನದಿಯಲ್ಲಿ ನಾಪತ್ತೆಯಾದ ಕಾರ್ಮಿಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News